
ಹುಬ್ಬಳ್ಳಿ : ಹಲವು ವರ್ಷಗಳಿಂದ ವಿದ್ಯುನ್ಮಾನ ಮಾದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹುಬ್ಬಳ್ಳಿ ತಾಲ್ಲೂಕಿನ ಬೆಳಗಲಿ ಗ್ರಾಮದ ಪತ್ರಕರ್ತ ಮಲ್ಲಿಕ್ ಬೆಳಗಲಿ ಅವರನ್ನು ಇಂದು ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾದ್ಯಮ ಸಂಯೋಜಕರಾಗಿ ನೇಮಕ ಮಾಡಲಾಗಿದೆ.
ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅನಿಲ್ ಕುಮಾರ್ ಪಾಟೀಲ್ ನೇಮಕಾತಿ ಆದೇಶ ಪ್ರತಿಯನ್ನು ಇಂದು ತಮ್ಮ ಗೃಹ ಕಚೇರಿಯಲ್ಲಿ ನೀಡಿ ಅಭಿನಂದಿಸಿದರು.