ಧಾರವಾಡ: ಗಣೇಶ ಚತುರ್ಥಿ ಅಂಗವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರು ಹಳ್ಳಿ ಹಳ್ಳಿಯಲ್ಲೂ ರೂಟ್ ಮಾರ್ಚ್ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲೂ ಇನ್‌ಸ್ಪೆಕ್ಟರ್ ಸಮೀರ್ ಮುಲ್ಲಾ, ಪಿಎಸ್ಐಗಳಾದ ಸಿದ್ರಾಮಪ್ಪ ಉಣ್ಣದ ಹಾಗೂ ಎಫ್.ಎಂ.ಮಂಟೂರ ಅವರ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು.

ಉಪ್ಪಿನ ಬೆಟಗೇರಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು. ನಾಳೆ ಐದು ದಿನದ ಗಣೇಶನ ಮೂರ್ತಿಗಳು ವಿಸರ್ಜನೆಗೊಳ್ಳಲಿದ್ದು, ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕೆ ವಹಿಸಿ ರೂಟ್ ಮಾರ್ಚ್ ಮಾಡಿದ್ದಾರೆ.
ಗರಗ ಠಾಣೆಯ ಎಲ್ಲ ಪೊಲೀಸರು ಈ ರೂಟ್ ಮಾರ್ಚ್‌ನಲ್ಲಿ ಪಾಲ್ಗೊಂಡಿದ್ದರು.
