
ಪಬ್ಲಿಕ್ ರೈಡ್ ನ್ಯೂಸ್
ಧಾರವಾಡ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಛೇರಿವರೆಗೆ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಆಕ್ರೋಶ ಹೊರಹಾಕಲಾಯಿತು.
ವೈ ನಗರದ ಕಡಪಾ ಮೈದಾನದಿಂದ ಜಿಲ್ಲೆಧಿಕಾರಿ ಕಚೇರಿಯವರೆಗೆ ಎಸ್‌ಯುಸಿಐ ಕಮ್ಯೂನಿಷ್ಟ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈಗಾಗಲೇ ರಾಜ್ಯ ಸೇರಿ ದೇಶದಲ್ಲಿ ಜನರು ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಬೆಲೆ ಏರಿಕೆಯನ್ನು ತಡೆಗಟ್ಟಬೇಕು, ಕಾರ್ಮಿಕ ವಿರೋಧಿ ನೀತಿ ಕೈಬಿಡಬೇಕು, ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ನೀಡಬೇಕು, ಜನ ವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿ-2020 ಅನ್ನು ತಕ್ಷಣವೇ ಹಿಂಪಡೆಯಬೇಕು, ಜನಪರ ಶಿಕ್ಷಣ ನೀತಿ ರೂಪಿಸಬೇಕು, ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಆದರೆ ಈಗಿರುವ ಸರ್ಕಾರಗಳಿಗೆ ಇವ್ಯಾವನ್ನು ಮಾಡುವ ಉದ್ದೇಶ ಕಾಣುತ್ತಿಲ್ಲ. ಸರ್ಕಾರ ಎಲ್ಲರಿಗೂ ಉಚಿತ ಆರೋಗ್ಯ ಸೇವೆ ನೀಡಬೇಕು ಆದರೆ ಅದನ್ನು ಎಲ್ಲಿ ನೀಡುತ್ತಿದೆ ಎಂದು ಪ್ರಶ್ನೆ ಮಾಡಿದರು. ಈ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಹು ಮುಖ್ಯವಾಗಿ ಬೆಲೆ ಏರಿಕೆಯನ್ನು ತಡೆಯಬೇಕು ಇದರಿಂದಾಗಿ ಮಧ್ಯಮ ವರ್ಗ ಸಂಕಷ್ಟಕ್ಕೆ ಸಿಲುಕುತ್ತಿವೆ. ಜೊತೆಗೆ ಕೂಡಲೇ ಕಾರ್ಮಿಕ ವಿರೋಧಿ, ರೈತರ ಎಮೆಸ್‌ಪಿ ಜಾರಿ ಸೇರಿ ಜನಕಲ್ಯಾಣ ನೀತಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದರು.