
ಗೌರಿಬಿದನೂರು
ಸವಿತಾ ಸಮಾಜವು ಅತ್ಯಂತ ಶ್ರೀಮಂತ ಪರಂಪರೆ ಹೊಂದಿದ್ದು, ಆ ನಿಟ್ಟಿನಲ್ಲಿ ಸವಿತಾ ಮಹರ್ಷಿಯವರ ಆದರ್ಶಗಳನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದರು.
ತಾಲೂಕಿನ ರಮಾಪುರ ಗ್ರಾಮದಲ್ಲಿ ಮಂಗಳವಾರ ಏರ್ಪಡಿಸಿದ್ದ ಸವಿತಾ ಮಹರ್ಷಿ ಜಯಂತಿಯ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸವಿತಾ ಸಮಾಜವು ಸಮಾಜದಲ್ಲಿ ವಿಶಿಷ್ಟ ಇತಿಹಾಸ ಹೊಂದಿದೆ. ಶಿವನ ದಿವ್ಯದೃಷ್ಟಿಯಲ್ಲಿ ಜನ್ಮ ತಾಳಿದ ಸವಿತಾ ಮಹರ್ಷಿ ಅವರು ಪುರಾಣ ಗ್ರಂಥದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಸಮಾಜದ ಶ್ರೇಷ್ಠತೆಗೆ ಶ್ರಮಿಸಿದ ಮಹಾನ್ ಯುಗಪುರುಷ, ಸವಿತಾ ಮಹರ್ಷಿ ಅವರು ಸಮಾಜ ಮುಖಿಯಾಗಿ ಬೆಳೆದು ದಾರಿದೀಪವಾಗಿದ್ದಾರೆ. ಇಂತಹ ಮಹಾತ್ಮರ ಜಯಂತಿಯನ್ನು ಆಚರಿಸುವ ಮೂಲಕ ಸರ್ಕಾರ ಇವರ ಆದರ್ಶಗಳ ಹಾದಿಯಲ್ಲಿ ನಡೆಯಲು ಬೆಳಕು ತೋರಿಸಿದೆ. ಸವಿತಾ ಸಮಾಜದ ಬದುಕು ಮಹರ್ಷಿಗಳ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು. ಸರ್ಕಾರದ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಕೆಎಚ್‌ಪಿ ಸಂಸ್ಥೆಯ ವ್ಯವಸ್ಥಾಪಕ ಶ್ರೀನಿವಾಸ ಗೌಡ ಮಾತನಾಡಿ, ಅಪಾರ ಜ್ಞಾನ ಭಂಡಾರ ಹೊಂದಿದ್ದ ಸವಿತಾ ಮಹರ್ಷಿ ಅವರು ನಾಲ್ಕನೇ ವೇದವಾದ ಸಾಮವೇದ ರಚಿಸಿದ್ದಾರೆ. ಇವರ ಮಗಳಾದ ಗಾಯತ್ರಿ ದೇವಿಯು ಶ್ರೇಷ್ಠ ಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ ಎಂದರು.
ಸವಿತಾ ಸಮಾಜದ ಮುಖಂಡ ತ್ಯಾಗರಾಜ್,
ತಾಪo ಮಾಜಿ ಉಪಾಧ್ಯಕ್ಷ ಎಚ್. ಎನ್. ಪ್ರಕಾಶ್ ರೆಡ್ಡಿ, ವೆಂಕಟ್, ಮಂಜುನಾಥ್ ರಾಮ್, ಜಿಡಿ ಶಿವಕುಮಾರ್, ಜೀವನ್ , ನಾಗೇಶ್, ಮಹಮ್ಮದ್ ಸುಹೇಲ್, ಅರ್ಜುನ್ ಗೌಡ, ಜೀಯಾವುಲ್ಲಾ ಮತ್ತಿತರರು ಭಾಗವಹಿಸಿದ್ದರು.
ಪಬ್ಲಿಕ್ ರೈಡ್