
ಬೆಂಗಳೂರು :ಫೆಬ್ರವರಿ 14, 2024
ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ ಮಾಡಲಾಗುವುದು ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಘೋಷಿಸಿದ್ದಾರೆ.
ರಾಜ್ಯದಲ್ಲಿ ಈಗಾಗಲೇ 18,32,787ವಾಹನಗಳಿಗೆ ಎಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ.
ರಾಜ್ಯದಲ್ಲಿ ಈವರೆಗೆ 9.16%. ಮಾತ್ರ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದ್ದು, ಬೇರೆ ರಾಜ್ಯಗಳಲ್ಲಿ ಇದು ವೇಗವಾಗಿ ಆಗಿದೆ. ನಮ್ಮ ರಾಜ್ಯದಲ್ಲಿ ನಂಬರ್ ಪ್ಲೇಟ್ ಅಳವಡಿಕೆ ತಡವಾಗಿದೆ. ಹೀಗಾಗಿ 3 ತಿಂಗಳು ಅವಧಿ ವಿಸ್ತರಣೆ ಮಾಡಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆಬ್ರವರಿ 17 ಕೊನೆ ದಿನಾಂಕ ಎಂದು ಈ ಹಿಂದೆ ಘೋಷಿಸಲಾಗಿತ್ತು. ಆದರೆ ದಿನಾಂಕ ಮುಂದೂಡುವಂತೆ ಒತ್ತಡ ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಮೂರು ತಿಂಗಳು ವಿಸ್ತರಿಸಲಾಗಿದೆ.
ನಕಲಿ ನಂಬರ್ ಪ್ಲೇಟ್, ವಾಹನಗಳನ್ನುಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್ ಮಾಡಲು ಸೇರಿದಂತೆ ಹಲವು ಕಾರಣಗಳಿಂದ ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗುತ್ತಿದೆ.
ಪಬ್ಲಿಕ್ ರೈಡ್ ನ್ಯೂಸ್
ಹುಬ್ಬಳ್ಳಿ ಧಾರವಾಡ ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ 8951160307