
Publicride news dharawad
ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಮೇ 7 ರಂದು ಮತಕ್ಷೇತ್ರದಲ್ಲಿ ಮುಕ್ತ, ನಿಷ್ಪಕ್ಷಪಾತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಮತದಾನ ಜರುಗಿಸಲು, ಧಾರವಾಡ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ ಎಂದು ಧಾರವಾಡ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.
ವೈ ಈ ಕುರಿತು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆ ಜರುಗಿಸಲು ಏಪ್ರಿಲ್ 12 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ವಿದ್ಯಾಕಾಶಿ ಎಂದೇ ಹೆಸರುವಾಸಿಯಾಗಿರುವ ಧಾರವಾಡ ಜಿಲ್ಲೆಯಲ್ಲಿ ಮೇ 7ರಂದು ತಪ್ಪದೇ ಮತಗಟ್ಟೆಗೆ ಬಂದು ಪ್ರತಿಯೊಬ್ಬ ಮತದಾರರು ತಮ್ಮ ಮತದಾನದ ಹಕ್ಕು ಚಲಾಯಿಸಬೇಕು. ಈ ಮೂಲಕ ತಮ್ಮ ಮತದಾನ ಕರ್ತವ್ಯ ಪ್ರಜ್ಞೆ ಮೆರೆದು ಇತರರಿಗೆ ಮಾದರಿ ಆಗಬೇಕೆಂದು ತಿಳಿಸಿದರು.
ಮೇ 7ರಂದು ಮತದಾನ ನಡೆಯಲಿರುವ ಹಿನ್ನೆಲೆ ಅಗತ್ಯ ಸಿದ್ಧತೆ ಹಾಗೂ ಮತಗಟ್ಟೆಯಲ್ಲಿ ಮತದಾರರಿಗೆ ಕಲ್ಪಿಸಿರುವ ವ್ಯವಸ್ಥೆ, ಕಾನೂನು ಸುವ್ಯವಸ್ಥೆಗೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ಧಾರವಾಡ ಲೋಕಸಭೆ ಚುನಾವಣೆಯನ್ನು ಯಶಸ್ವಿಯಾಗಿ ನಿಯಮಾನುಸಾರ ಜರುಗಿಸಲು ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.