
ಹುಬ್ಬಳ್ಳಿ :ನಗರದ ಬ್ಯಾಂಕವೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಕೆಲಹೊತ್ತು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿದ ಘಟನೆ ಗೋಕುಲ ರಸ್ತೆಯ ಆಕ್ಸಿಸ್ ಬ್ಯಾಂಕ್ ನಲ್ಲಿ ನಡೆದಿದೆ.
ಇಲ್ಲಿನ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ಸಮೀಪದ ಆಕ್ಸಿಸ್ ಬ್ಯಾಂಕ್‌ನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದೆ. ಇ ವೇಳೆ ದಟ್ಟನೆಯ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಸಾರ್ವಜನಿಕರು ಕೂಡಲೇ ಅಗ್ನಿಶಾಮಕ ದಳಕ್ಕೆ ಹಾಗೂ ಗೋಕುಲ ರಸ್ತೆಯ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಇನ್ನೂ ಘಟನಾ ಸ್ಥಳಕ್ಕೆ ಗೋಕುಲ ರಸ್ತೆ ಪೊಲೀಸರು ಆಗಮಿಸಿ ಬ್ಯಾಂಕ್ ರಜೆ ಇದ್ದರೂ ಕೂಡಾ ಹೇಗೆ ಬೆಂಕಿ ಹತ್ತಿಕೊಂಡಿದೇ ಎಂಬುದರ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.