April 19, 2025

ಪಬ್ಲಿಕ್ ರೈಡ್ ಪೀಣ್ಯ ದಾಸರಹಳ್ಳಿ: ದಾಸರಹಳ್ಳಿಯ ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ವೇದಿಕೆ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾಸರಹಳ್ಳಿ ಘಟಕ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು. ದಾಸರಹಳ್ಳಿ ಘಟಕ, ಅಕ್ಕಮಹಾದೇವಿ ಮಹಿಳಾ ಸಮಾಜ ದಾಸರಹಳ್ಳಿ ಮತ್ತು ಕಾಯಕಯೋಗಿ ಸಹಕಾರ ಸಂಘದ ವತಿಯಿಂದ ಮೇ 26ರಂದು ಭಾನುವಾರ ಬಾಗಲಗುಂಟೆಯ ಶ್ರೀ ಸಾಯಿ ಕಲ್ಯಾಣ ಮಂಟಪದಲ್ಲಿ ಬಸವ ಜಯಂತಿ ಹಾಗೂ ಕಾಯಕಯೋಗಿ ಪ್ರಶಸ್ತಿ ಪ್ರಧಾನ ಸಮಾರಂಭ ಆಯೋಜಿಸಲಾಗಿದೆ’ ಎಂದು ವೀರಶೈವ ಲಿಂಗಾಯತ ಕ್ಷೇಮಾಭಿವೃದ್ಧಿ ವೇದಿಕೆ ದಾಸರಹಳ್ಳಿ ಘಟಕದ ಅಧ್ಯಕ್ಷ ಬಿ.ಟಿ. ಸುರೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಬಸವರಾಜಣ್ಣ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಂಜೆ 4 ಗಂಟೆಗೆ ದಾಸರಹಳ್ಳಿ ಮೆಟ್ರೋ ನಿಲ್ದಾಣದಿಂದ ಬಸವಣ್ಣನವರ ಪುತ್ತಳಿಯನ್ನು ಸಾರೋಟಿನಲ್ಲಿ ಕಲಾತಂಡಗಳೊಂದಿಗೆ ಬಾಗಲಗುಂಟೆಯ ಸಾಯಿ ಕಲ್ಯಾಣ ಮಂಟಪದವರೆಗೂ ಮೆರವಣಿಗೆ ನಡೆಸಲಾಗುವುದು’ ಎಂದರು.

ಸಂಜೆ 6 ಗಂಟೆಗೆ ವೇದಿಕೆಯ ಕಾರ್ಯಕ್ರಮದಲ್ಲಿ “ಕಾಯಕಯೋಗಿ ಪ್ರಶಸ್ತಿ’ ಪ್ರಧಾನವನ್ನು ಇಸ್ರೋದ ಮಾಜಿ ಅಧ್ಯಕ್ಷ ಹಾಗೂ ವಿಜ್ಞಾನ ಕ್ಷೇತ್ರದ ಎ.ಎಸ್. ಕಿರಣ್ ಕುಮಾರ್, ಸಹಕಾರ ಕ್ಷೇತ್ರದಲ್ಲಿ ಎ. ವಿಶ್ವನಾಥಯ್ಯ, ಸಮಾಜ ಸೇವೆಯಲ್ಲಿ ಎಂ.ಎಸ್. ಬಸವರಾಜು ಅವರಿಗೆ ಪ್ರಶಸ್ತಿ ನೀಡಲಾಗುವುದು.

‘ಈ ಸಮಾರಂಭಕ್ಕೆ ತುಮಕೂರಿನ ಹಿರೇಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಶಾಸಕ ಎಸ್. ಮುನಿರಾಜು ಮತ್ತು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಜಿ. ಮರಿಸ್ವಾಮಿ ಆಗಮಿಸುವರು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!