
ಹುಬ್ಬಳ್ಳಿ: ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಶೇಖರಯ್ಯ ಮಠಪತಿಯವರ ಮಗನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು. ಅಲ್ಲದೇ ಮಠಪತಿಯವರ ಕುಟುಂಬಕ್ಕೆ ಆ ದೇವರು ನೋವನ್ನು ಸಹಿಸುವ ಶಕ್ತಿ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಹುಬ್ಬಳ್ಳಿಯ ಕಿಮ್ಸ್ ಶವಗಾರದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶೇಖರಯ್ಯ ಮಠಪತಿಯವರ ಮಗನ ಪ್ರಕರಣದ ಬಗ್ಗೆ ಸ್ಪಷ್ಟತೆ ಇಲ್ಲ. ಈಗಾಗಲೇ ಮಠಪತಿಯವರು ಹೇಳಿರುವ ರೀತಿಯಲ್ಲಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರ ಜೊತೆಗೆ ಮಾತನಾಡಿದ್ದೇನೆ ಈ ಬಗ್ಗೆ ಕುಲಂಕೂಷವಾಗಿ ತನಿಖೆ ನಡೆಸಿ ಸೂಕ್ತ ಕ್ರಮಗಳನ್ನು ಜರುಗಿಸಬೇಕಿದೆ ಎಂದರು.
ಇನ್ನೂ ಮರಣೋತ್ತರ ಪರೀಕ್ಷೆಯಲ್ಲಿ ಕೇವಲ ಹಣೆಗೆ ಮಾತ್ರವೇ ಹೊಡೆತ ಬಿದ್ದಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಪೊಲೀಸ್ ಇಲಾಖೆಯು ಸೂಕ್ತ ತನಿಖೆ ನಡೆಸಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಜರುಗಿಸಬೇಕಿದೆ ಎಂದು ಅವರು ಆಗ್ರಹಿಸಿದರು.