
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ: ಕಳೆದ ಎರಡು ವರ್ಷಗಳ ಹಿಂದೆ ಶುರುವಾಗಿದ್ದ ಕಾಮಗಾರಿಯನ್ನು ಗುತ್ತಿಗೆದಾರರು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸದೇ ಇರುವುದರಿಂದ ಸ್ಥಳ ಪರಿಶೀಲನೆ ಮಾಡಿದ ಬಿಬಿಎಂಪಿ ಮುಖ್ಯ ಅಭಿಯಂತರ ಪ್ರಹ್ಲಾದ್ ಗುತ್ತಿಗೆದಾರರನ್ನು ಬ್ಲಾಕ್ ಲಿಸ್ಟ್ ಗೆ ಸೇರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನೆಲಗದರನಹಳ್ಳಿ ಮುಖ್ಯರಸ್ತೆ ಮತ್ತು ಹೆಸರಘಟ್ಟ ಮುಖ್ಯರಸ್ತೆ ಹಾಗೂ ವ್ಯೆಮ್ಯಾಕ್ ಸರ್ಕಲ್ ಮುಖ್ಯರಸ್ತೆಯೂ ನಿಧಾನ ಗತಿಯಲ್ಲಿ ಕೆಲಸಸಾಗುತ್ತಿದ್ದು ಹಾಗೂ ಕಳಪೆ ಕಾಮಗಾರಿಯಿಂದ ಕೂಡಿದ್ದು ಸರಿಯಾಗಿ ಕೆಲಸ ಮಾಡದ ಹಿನ್ನಲೆ ಶಾಸಕ ಎಸ್. ಮುನಿರಾಜು ಹಾಗೂ ಮುಖ್ಯ ಅಭಿಯಂತರರು ಸ್ಥಳ ಪರೀಶೀಲನೆ ಮಾಡಿದರು.
ಬಳಿಕ ಮಾತನಾಡಿದ ಬಿಬಿಎಂಪಿ ಮುಖ್ಯ ಅಭಿಯಂತರ ಪ್ರಹ್ಲಾದ್ ‘ಕಳಪೆ ಕಾಮಗಾರಿ ನಡೆಯುತ್ತಿರುವುದು ಕಂಡುಬಂದಿದೆ ಅವರ ವಿರುದ್ದ ಕಠಿಣ ಕ್ರಮಕೈಗೊಳ್ಳುತ್ತೇವೆ.ಮುಂದಿನ ಆರು ತಿಂಗಳೊಳಗೆ ಗುಣಮಟ್ಟದ ಕಾಮಗಾರಿ ಮಾಡುವುದಾಗಿ ತಿಳಿಸಿದರು.
ಈಗಾಗಲೇ ಗುತ್ತಿಗೆದಾರರಿಗೆ ನಾಲ್ಕು ನೋಟೀಸ್ ನೀಡಲಾಗಿದ್ದು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ. ಹಾಗಾಗಿ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಂಡು, ಬೇರೊಂದು ಕಂಪನಿಯಿಂದ ಗುಣಮಟ್ಟದ ಕಾಮಗಾರಿ ಮಾಡಿಸಿ ನೆಲಗದರನಹಳ್ಳಿ ಮುಖ್ಯರಸ್ತೆಯನ್ನು ಆಗಸ್ಟ್ ಅಂತ್ಯದೊಳಗೆ ಹೆಸರಘಟ್ಟ ಮುಖ್ಯರಸ್ತೆಯನ್ನುಡಿಸೆಂಬರ್ ಅಂತ್ಯಕ್ಕೆ ಮುಗಿಸಲಾಗುವುದು ಎಂದು’ ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಎಸ್. ಮುನಿರಾಜು ಮಾತನಾಡಿ ‘ಹೆಸರಘಟ್ಟದ ಮುಖ್ಯರಸ್ತೆಯನ್ನು 15 ಕೋಟಿಗೆ ಗುತ್ತಿಗೆ ನೀಡಲಾಗಿತ್ತು. ಆದರೆ ಮೂರು ಕೋಟಿಯಷ್ಟು ಕಾಮಗಾರಿ ಮಾಡದೇ ಎಂಟು ಕೋಟಿಗೆ ಬಿಲ್ ಮಾಡಿದ್ದರು. ಆದ್ದರಿಂದ ಅಷ್ಟು ಕಾಮಗಾರಿ ನಡೆದಿಲ್ಲ ಬಿಲ್ ನೀಡಬೇಡಿ’ ಎಂದು ಪತ್ರ ಬರೆದ ಹಿನ್ನಲೆಯಲ್ಲಿ ಇಂದು ಬಿಬಿಎಂಪಿ ಚೀಪ್ ಎಂಜಿನಿಯರ್ ಸ್ಥಳ ಪರಿಶೀಲನೆ ಮಾಡಿ ಡಿಸೆಂಬರ್ ಒಳಗೆ ಗುಣಮಟ್ಟದ ಕಾಮಗಾರಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ’ ಎಂದರು.