
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ: ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ ಎಂದು ಶಾಸಕ ಎಸ್. ಮುನಿರಾಜು ಹೇಳಿದರು.
ಅಭಿಮಾನಿ ಬಳಗದ ವತಿಯಿಂದ ಕೆಂಪೇಗೌಡ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ, ಆರೋಗ್ಯ ಶಿಬಿರ, ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಬಾಗಲಗುಂಟೆಯ ಮಂಜುನಾಥನಗರದಲ್ಲಿ ನಾಡಪ್ರಭ ಕೆಂಪೇಗೌಡರ ಜಂಯತಿಯನ್ನು ಕೆಂಪೇಗೌಡರ ಪುತ್ಥಳಿಗೆ ಹೂಮಾಲೆ ಹಾಗೂ ಪುಷ್ಪಾರ್ಚನೆ ಮಾಡಿ ಬಳಿಕ ಮಾತನಾಡಿದರು.
ಎಲ್ಲಾ ಸಮುದಾಯಗಳ ವೃತ್ತಿಗಳಿಗೆ ಮತ್ತು ಅವರ ವ್ಯಾಪಾರ ವಹಿವಾಟುಗಳಿಗೆ ಅನುಕೂಲವಾಗುವ ದೂರದೃಷ್ಟಿಯಿಂದ ಬೆಂಗಳೂರು ನಗರದಲ್ಲಿ 500 ವರ್ಷಗಳ ಹಿಂದೆಯೇ ಪೇಟೆಗಳನ್ನು ನಿರ್ಮಾಣ ಮಾಡಿ ಸುಸಜ್ಜಿತ ನಗರವನ್ನು ಕೆಂಪೇಗೌಡರು ನಿರ್ಮಾಣ ಮಾಡಿದ್ದಾರೆಂದು ಬಿಜೆಪಿ ಮುಖಂಡ ಲಕ್ಷ್ಮಣ್ ಗೌಡ್ರು ಹೇಳಿದರು.
ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡ ಅವರು 1537 ರಲ್ಲೇ ಬೆಂಗಳೂರು ನಗರವನ್ನು ಕಟ್ಟಿ ಬಳಿಕ ಕೆಂಪೇಗೌಡರ ರಾಜ್ಯಧಾನಿಯನ್ನು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು. ಎಲ್ಲಾ ಕುಲ ಕಸುಬುದಾರರಿಗೆ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟು ಬೆಂಗಳೂರು ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬೆಳೆಸಲು ಕಾರಣರಾದರು ಎಂದು ಬೆಂಗಳೂರು ಉತ್ತರ ಜಿಲ್ಲಾ ಸಮಿತಿ ಉಪಾಧ್ಯಕ್ಷ ಡಾ. ಎಸ್.ಮಂಜುನಾಥ್ (ಎಬಿಬಿ ಮಂಜಣ್ಣ) ಹೇಳಿದರು.
ಈ ಸಂದರ್ಭದಲ್ಲಿ ಮುಖಂಡರಾದ ಹೊನ್ನಪ್ಪ, ಉಮೇಶ್, ಮಧುಗೌಡ, ಶ್ರೀನಿವಾಸ್, ಗುನ್ನಯ, ಮಂಜೇಗೌಡ ಮುಂತಾದವರು ಉಪಸ್ಥಿತರಿದ್ದರು.