
ಧಾರವಾಡ: ಬೇರೆ ರಾಜ್ಯದಿಂದ ಅಕ್ರಮವಾಗಿ ಮದ್ಯವನ್ನು ತಂದಿಲ್ಲದೆ ಆ ಮದ್ಯಕ್ಕೆ ಕೆಮಿಕಲ್ ಮಿಶ್ರಣ ಮಾಡಿ ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ನಕಲಿ ಮದ್ಯವನ್ನು ರೆಡಿ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇಧಿಸುವಲ್ಲಿ ಧಾರವಾಡದ ಕಲಘಟಗಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಮಿಶ್ರಿಕೋಟಿ ಕ್ರಾಸ್ ಬಳಿಯಲ್ಲಿನ ಗೋಡೌನ್’ನಲ್ಲಿ ನಕಲಿ ಮದ್ಯ ತಯಾರು ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ, ಕಲಘಟಗಿ ಠಾಣೆಯ ಇನ್ಸ್ಪೆಕ್ಟರ್ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ದಾಳಿ ಮಾಡಿ ನಾಲ್ಕು ಜನ ಆರೋಪಿಗಳನ್ನು ವಶಕ್ಕೇ ಪಡೆದು 33 ಲಕ್ಷ ಮೌಲ್ಯದ ಮದ್ಯ ವಶಕ್ಕೇ ಪಡೆದಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಜನ ಆರೋಪಿಗಳು ಹುಬ್ಬಳ್ಳಿ ಮೂಲದವರು ಎಂದು ಎಂದು ಹೇಳಲಾಗುತ್ತಿದೆ. ಇನ್ನೂ ಗೋವಾದಿಂದ ಇವರು ಮದ್ಯ ತರುವ ಕುರಿತು ಸೇರಿದಂತೆ ಪ್ರತಿಷ್ಠಿತ ಕಂಪನಿಯ ಹೆಸರಿನಿಂದ ನಕಲಿ ಮದ್ಯ ಮಾರಟ ಜಾಲ ಕುರಿತು ಪೊಲೀಸರ ತನಿಖೆಯ ನಂತರವಷ್ಟೇ ತಿಳಿದು ಬರಬೇಕಾಗಿದೆ. ಈ ಕುರಿತ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.