
ಪಬ್ಲಿಕ್ ರೈಡ್ ನ್ಯೂಸ್ ಪೀಣ್ಯದಾಸರಹಳ್ಳಿ:’ಬಡವರು, ಕೂಲಿ ಕಾರ್ಮಿಕರು, ಮಧ್ಯಮವರ್ಗದ ಜನರೇ ಹೆಚ್ಚಾಗಿ ವಾಸಮಾಡುವ ಹೆಗ್ಗನಹಳ್ಳಿ ಹೊಯ್ಸಳ ನಗರ ಭಾಗದಲ್ಲಿ ನಮ್ಮ ಕ್ಲೀನಿಕ್ ಉದ್ಘಾಟನೆಯಾಗಿರುವುದು ತುಂಬಾ ಉಪಯೋಗವಾಗಲಿದೆ’ ಎಂದು ಶಾಸಕ ಎಸ್. ಮುನಿರಾಜು ತಿಳಿಸಿದರು.
ಹೆಗ್ಗನಹಳ್ಳಿಯಲ್ಲಿ ನಮ್ಮ ಕ್ಲಿನಿಕ್ ಉದ್ಗಾಟನೆ ಮಾಡಿ ಮಾತನಾಡಿದರು.ದಾಸರಹಳ್ಳಿ ಕ್ಷೇತ್ರ ಸುಮಾರು 8500ಕ್ಕೂ ಹೆಚ್ಚು ಮಧ್ಯಮ ಹಾಗೂ ಸಣ್ಣ ಕೈಗಾರಿಕೆಗಳಿದ್ದು 10 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳಿದ್ದಾರೆ. ಅವರಲ್ಲಿ 8 ಲಕ್ಷದಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ. ಅವರು ಯಾರು ಶ್ರೀಮಂತರಲ್ಲ ಹಾಗಾಗಿ ಅವರಿಗೆ ಆರೋಗ್ಯದಲ್ಲಿ ಏರುಪೇರಾದರೆ ಖಾಸಗಿ ಆಸ್ಪತ್ರಗಳಲ್ಲಿ ಚಿಕಿತ್ಸೆ ಪಡೆಯುವುದು ದುಸ್ತರವಾಗಿರುವುದರಿಂದ ನಮ್ನ ಕ್ಲೀನಿಕ್ ತುಂಬಾ ಸಹಕಾರಿಯಾಗಿದೆ ಎಂದರು.
ಬಡವರಿಗೆ ತುರ್ತಾಗಿ ಚಿಕಿತ್ಸೆ ಪಡೆಯೋದು ಕಷ್ಟಕರವಾಗಿತ್ತು. ಈ ನಮ್ಮ ಕ್ಲಿನಿಕ್ ಯೋಜನೆ ಬಡವರಿಗೆ ಬಹಳ ಅವಶ್ಯಕತೆ ಇದೆ .ಬಡವರಿಗೆ ಅತ್ಯುತ್ತಮ ಚಿಕಿತ್ಸೆ ಮುಟ್ಟಬೇಕು .ಜೊತೆಗೆ ಅಧಿಕಾರಿಗಳು ನಮ್ಮ ಕ್ಲಿನಿಕ್ ಬಗ್ಗೆ ಕುರಿತು ಅರಿವೂ ಮೂಡಿಸಬೇಕು .ನಮ್ಮ ಕ್ಲಿನಿಕ್ ನಲ್ಲಿ ದೊರೆಯುವ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಿಳಿಯುವಂತೆ ಮಾಡಭೇಕು’ ಎಂದರು.
‘ನಮ್ಮ ಕ್ಲಿನಿಕ್‌ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿದೆ. ತಲಾ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್, ಡಿ ದರ್ಜೆ ನೌಕರರು ಇಲ್ಲಿ ಇರಲಿದ್ದಾರೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ, ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ , ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್, ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಸೇವೆಗಳು, ಕಣ್ಣಿನ ತಪಾಸಣೆ, ಮೆಂಟಲ್ ಹೆಲ್ತ್‌ಗೆ ಸಂಬಂಧಿಸಿದ ಮೂಲಭೂತ ಸೇವೆಗಳು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ರೆಫರಲ್ ಸೇವೆಗಳು ಇಲ್ಲಿ ಲಭ್ಯವಾಗಲಿದೆ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.
ಮಾಜಿ ಬಿಬಿಎಂಪಿ ಕಾರ್ಪೊರೇಟರ್ ಭಾಗ್ಯಮ್ಮ ಅವರ ಪತಿ ಕೃಷ್ಣಯ್ಯ. ಆರೋಗ್ಯ ಅಧಿಕಾರಿ ಡಾ.ರವೀಂದ್ರ, ಬಿಜೆಪಿ ಯುವ ಮುಖಂಡ ಸಪ್ತಗಿರಿ ಆನಂದ್ ಆರೋಗ್ಯ ವೈದ್ಯಕೀಯ ಅಧಿಕಾರಿ ಡಾ. ಸುರೇಶ್ ರುದ್ರಪ್ಪ, ಡಾ. ಸಂಜನಾ, ಎಂಜಿನಿಯರ್ ಪ್ರವೀಣ್, ಆರೋಗ್ಯ ಅಧಿಕಾರಿಗಳು, ನರ್ಸ್ ಗಳು ಇದ್ದರು.